ಅನುಬಂಧ
This text was machine-transcribed from the printed book and may contain errors. Select the words and choose “Report a mistake”.

ನಿತ್ಯಾನಂದರ ಬಗ್ಗೆ
ಮಾನವನ ಜೀವನದುದ್ದೇಶದ ಕೊನೆ ಯಿಲ್ಲದ ಅನ್ವೇಷಣೆಯು ಈ ಸಾಲಿ ನಿಂದ ಕೊನೆಗೊಳ್ಳುತ್ತದೆ. ಪರಮಾ ನಂದವೇ ಹಾದಿ ಹಾಗೂ ಗುರಿ. ಇದು ಪರಮಹಂಸ ನಿತ್ಯಾನಂದರ ಅನುಭವ ಹಾಗೂ ಬೋಧನೆ. ನಿತ್ಯಾನಂದರು ನಮ್ಮೊಡನೆ ಈಗಿರುವ ಒಬ್ಬ ಜ್ಞಾನೋ ದಯ ಹೊಂದಿದ ಗುರು ಹಾಗೂ ನವಕಾಲೀನ ಅತೀಂದ್ರಿಯವಾದಿ.
ಪರಮಾನಂದವು ಕೊನೆಯಲ್ಲಿ ಸಿಗುವಂತಹದಲ್ಲ, ಆದರೆ ಅದರ ಹಾದಿಯೇ ಪರಮಾನಂದವೆಂಬ ಅವರ ಅನುಭವ ಸಹಿತ ಜ್ಞಾನವನ್ನು ಮೊದಲು ನೀಡುವುದೇ ಅವರ ಜೀವಿತದ ಧೈಯವಾಗಿದೆ. ಎಂದರೆ
ದಿನದ 24 ಗಂಟೆಗಳಲ್ಲಿಯೂ ಪರಮಾನಂದದಲ್ಲಿ ಇರಲು ಸಾಧ್ಯವಾಗುವಂತಹ ಸ್ಥಿತಿ! ನಾವು ನಮ್ಮ ಚಿದಾವಕಾಶದಲ್ಲಿ ಶ್ರಮಿಸುವುದರ ಮೂಲಕ ಈ ಸ್ಥಿತಿಯನ್ನು ಪಡೆಯಲು ಸಾಧ್ಯವೆಂದು ಅವರು ತಿಳಿಯಪಡಿಸುತ್ತಾರೆ.
ನಿತ್ಯಾನಂದರು ದಕ್ಷಿಣ ಭಾರತದ ಒಂದು ಪ್ರಮುಖವಾದ ಆಧ್ಯಾತ್ಮಿಕ ಕೇಂದ್ರವಾದ ತಿರುವಣ್ಣಾಮಲೈ, ಎಂಬ ಊರಿನಲ್ಲಿ ಜನಿಸಿದರು. ತೀವ್ರ ಧ್ಯಾನ, ಹಾಗೂ ಯೋಗ, ತಂತ್ರ ಮತ್ತು ಇತರ ಪೌರಾತ್ಯ ಅತೀಂದ್ರಿಯ ಜ್ಞಾನಗಳ ಅಧ್ಯಯನದ ಮೂಲಕ ಆಂತರ್ಯದ ಪರಮಾನಂದ ಸ್ಥಿತಿಯನ್ನು ಹೊಂದಿದರು. ವೈಯಕ್ತಿಕ ಅರಿವನ್ನು ಸ್ಫೋಟಗೊಳಿಸಿ ಆಧ್ಯಾತ್ಮಿಕವಾಗಿ ಬಲಶಾಲಿಗಳಾದ ವ್ಯಕ್ತಿಗಳನ್ನು ಸೃಷ್ಟಿಸಲು ಅವರು ಸ್ವಾನುಭವದಿಂದ ಪರಮಾನಂದದ ತಂತ್ರಶಾಸ್ತ್ರವನ್ನು ನಿರೂಪಿಸಿದ್ದಾರೆ.
ನಮ್ಮ ಸಹಜಸ್ಥಿತಿಯಾದ ಧ್ಯಾನದಲ್ಲಿ ಮುಳುಗಲು ಅವರು ಅಸಂಖ್ಯಾತ ಕ್ರಮವಿಧಾನಗಳನ್ನು ನಿರ್ಮಿಸಿದ್ದಾರೆ. ಅವರು, 'ವಾಸ್ತವ ಪ್ರಪಂಚದಲ್ಲಿ ಯಶಸ್ಸನ್ನು ಗಳಿಸಲು ಹಾಗೂ ಆಂತರ್ಯದಲ್ಲಿ ಆಳವಾದ ಪೂರ್ಣತೆಯನ್ನು ಪಡೆಯಲು, ಧ್ಯಾನವೊಂದೇ ಇಂತಹ ಬೀಗಗಳನ್ನು ತೆಗೆಯಬಲ್ಲ ಕೀಲಿಕೈ' ಎಂದು ಹೇಳುತ್ತಾರೆ.